ಶಿವಮೊಗ್ಗ, ಫೆ 21 (DaijiworldNews/HR): ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಎಡಿಜಿಪಿ ಮುರುಗನ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದ್ದು ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಕೆಲವೆಡೆ ಅಹಿತಕರ ಘಟನೆಗಳು ನಡೆದಿದೆ. ಯಾರೇ ಆಗಲಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.
ಇನ್ನು ಯಾರೂ ಬೆಂಕಿ ಹಚ್ಚಬೇಡಿ, ಕಾನೂನು ಸುವ್ಯವಸ್ಥೆ ಕಾಪಾಡಲು ನೇರವಾಗಿ. ನಿಮ್ಮ ಊರನ್ನು ನೀವೇ ಬೆಂಕಿ ಹಚ್ಚಿ ಹಾಳು ಮಾಡಬೇಡಿ. ಉಳಿದ ಆರೋಪಿಗಳನ್ನು ಬಂಧಿಸಿ, ತನಿಖೆ ಪೂರ್ಣ ಗೊಂಡ ಬಳಿಕ ಆರೋಪಿಗಳ ಕುರಿತು ಪೂರ್ಣ ಮಾಹಿತಿ ನೀಡಲಾಗುವುದು ಎಂದಿದ್ದಾರೆ.
ಕಾರ್ಯಕರ್ತನ ಶವಯಾತ್ರೆ ವೇಳೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಾಕಿದ್ದು ಭಾರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಹೆಚ್ಚುವರಿ ಪಡೆಗಳನ್ನು ಆಯಕಟ್ಟಿನ ಸ್ಥಳಗಲ್ಲಿ ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.