ರಾಂಚಿ, ಫೆ 21 (DaijiworldNews/HR): ಬಹುಕೋಟಿ ರೂಪಾಯಿ ವಂಚನೆ ಹಾಗೂ ಮೇವು ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಂಚಿಯ ವಿಶೇಷ ಸಿಬಿಐ ಕೋರ್ಟ್ ಬಿಹಾರ ಮಾಜಿ ಮುಖ್ಯಮಂತ್ರಿ, ಆರ್ ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರಿಗೆ 5 ವರ್ಷ ಜೈಲುಶಿಕ್ಷೆ ಹಾಗೂ 60 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಲಾಲೂಪ್ರಸಾದ್ ಯಾದವ್ ದೊರಾಂಡಾ ಖಜಾನೆ ದುರ್ಬಳಕೆ ಪ್ರಕರಣದಲ್ಲಿ ದೋಷಿ ಎಂದು ವಿಶೇಷ ಸಿಬಿಐ ಕೋರ್ಟ್ ಕಳೆದ ವಾರ ತೀರ್ಪು ನೀಡಿದ್ದು, ಈ ಪ್ರಕರಣದಲ್ಲಿ ಮಾಜಿ ಸಂಸದ ಜಗದೀಶ್ ಶರ್ಮಾ, ಪಿಎಸಿ (ಸಾರ್ವಜನಿಕ ಲೆಕ್ಕಪತ್ರ ಸಮಿತಿ)ಯ ಅಧ್ಯಕ್ಷ ಧ್ರುವ್ ಭಗತ್, ಪಶುಸಂಗೋಪನಾ ಕಾರ್ಯದರ್ಶಿ ಬೆಕ್ ಜೂಲಿಯಸ್ ಮತ್ತು ಪಶುಸಂಗೋಪನಾ ಸಹಾಯಕ ನಿರ್ದೇಶಕ ಡಾ.ಕೆ.ಎಂ ಪ್ರಸಾದ್ ಪ್ರಮುಖ ಆರೋಪಿಗಳಾಗಿದ್ದಾರೆ.
ಇನ್ನು ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಪ್ರಕರಣದಲ್ಲಿನ 24 ಆರೋಪಿಗಳನ್ನು ಕೋರ್ಟ್ ಖುಲಾಸೆಗೊಳಿಸಿದ್ದು, ಲಾಲೂಪ್ರಸಾದ್ ಯಾದವ್ ಗೆ ಹೋಟ್ವಾರ್ ಜೈಲ್ ನಲ್ಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು.