ಬೆಂಗಳೂರು, ಫೆ 21 (DaijiworldNews/KP): ಕಾಂಗ್ರೆಸ್ ಅಧಿಕಾರ ಅವಧಿಯಲ್ಲಿ ಪ್ರತೀ ಹತ್ಯೆ ಆದಾಗಲೂ ಸಿದ್ದರಾಮಯ್ಯರನ್ನು ಬೈಯುತ್ತಿದ್ದೆವು. ಇವತ್ತು ನಮ್ಮದೇ ಸರ್ಕಾರ ಇದ್ದರೂ ನಮ್ಮ ಕಾರ್ಯಕರ್ತನೊಬ್ಬ ಹತ್ಯೆಯಾಗಿರುವುದು ನಾಚಿಕೆಯ ಸಂಗತಿ ಎಂದರು. ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಶಿವಮೊಗ್ಗದ ಹಿಂದೂ ಸಂಘಟನೆ ಕಾರ್ಯಕರ್ತನ ಕೊಲೆ ಪ್ರಕರಣದ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರ ಅವಧಿಯಲ್ಲಿ ಪ್ರತೀ ಹತ್ಯೆ ಆದಾಗಲೂ ಸಿದ್ದರಾಮಯ್ಯರನ್ನು ಬೈಯುತ್ತಿದ್ದೆವು. ಆದರೆ ಇವತ್ತು ನಮ್ಮದೇ ಸರ್ಕಾರ ಇದ್ದರೂ ನಮ್ಮ ಕಾರ್ಯಕರ್ತನೊಬ್ಬ ಹತ್ಯೆಯಾಗಿರುವುದು ನಾಚಿಕೆಯ ಸಂಗತಿ ಎಂದು ಹೇಳಿದರು.
ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಬೀದಿಯಲ್ಲಿ ಕಗ್ಗೊಲೆಯಾಗಿದ್ದಾರೆ. ಇದು ನನಗೆ ಅತೀವ ನೋವು ತಂದಿದೆ. ಈ ಕುರಿತು ಸಿಎಂ ಬೊಮ್ಮಾಯಿ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆಂದು ಪತ್ರಿಕಾ ಹೇಳಿಕೆ ಕೊಟ್ಟರೆ ಪ್ರಯೋಜನ ಇಲ್ಲ, ಅವರು ಮಾತು ನಿಲ್ಲಿಸಿ ಕೆಲಸದಲ್ಲಿ ಕಠಿಣತೆಯನ್ನು ತೋರಿಸಲಿ ಎಂದು ಹೇಳಿದರು.
ಇನ್ನು ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದಾಗ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ನಡೆಯಿತು, ಈಗ ಅವರೇ ಸಿಎಂ ಆಗಿದ್ದಾರೆ, ಅಂದೆ ಎಸ್ಡಿಪಿಐ, ಪಿಎಫ್ಐ ಮೇಲೆ ಕ್ರಮ ತಗೊಂಡಿದ್ದರೆ ಈ ಕೊಲೆ ಆಗುತ್ತಿರಲಿಲ್ಲ ಎಂದು ಹೇಳಿದರು.
ಇನ್ನು ಹಿಜಾಬ್ ವಿಚಾರಕ್ಕೆ ಬಂದರೆ ಹೈಕೋರ್ಟ್ನ ಮಧ್ಯಂತರ ಆದೇಶವನ್ನು ಯಾರು ಪಾಲನೆ ಮಾಡುತ್ತಿಲ್ಲ ಇದರಿಂದ ರಾಜ್ಯದಲ್ಲಿ ಆಶಾಂತಿ ಸೃಷ್ಟಿಯಾಗಿದೆ, ಆದರೆ 144 ಸೆಕ್ಷನ್ ಉಲ್ಲಂಘನೆ ಮಾಡಿದವರ ಮೇಲೆ ಕ್ರಮ ಕೈಕೊಂಡಿಲ್ಲ. ಈಗ ನಮ್ಮ ಕಾರ್ಯಕರ್ತನ ಹತ್ಯೆಯಾಗಿದೆ ಇನ್ನು ಯಾವಾಗ ಸರ್ಕಾರ ಕ್ರಮ ಕೈಗೊಳ್ಳುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.