ನವದೆಹಲಿ, ಫೆ 21 (DaijiworldNews/KP): ಧರ್ಮವನ್ನು ಲೆಕ್ಕಿಸದೆ ಕಡ್ಡಾಯವಾಗಿ ಸಮವಸ್ತ್ರ ಧರಿಸುವ ನಿಯಮವನ್ನು ಪಾಲನೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಸಂದರ್ಶನವೊಂದರಲ್ಲಿ ಹಿಜಾಬ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಧರ್ಮವನ್ನು ಲೆಕ್ಕಿಸದೆ ಕಡ್ಡಾಯವಾಗಿ ಸಮವಸ್ತ್ರ ಧರಿಸುವ ನಿಯಮವನ್ನು ಪಾಲನೆ ಮಾಡಬೇಕು ಎಂದು ನಾನು ವೈಯಕ್ತಿವಾಗಿ ನಂಬುತ್ತೇನೆ ಎಂದು ಹೇಳಿದರು.
ಸದ್ಯ ಈ ವಿಷಯ ನ್ಯಾಯಾಲಯದ ಮುಂದೆ ಇದ್ದು, ನ್ಯಾಯಾಲಯದ ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳಬೇಕು, ಇನ್ನು ನ್ಯಾಯಾಲಯದ ತೀರ್ಪು ಬರುವವರೆಗೂ ನನ್ನ ವೈಯಕ್ತಿಕ ನಿಲುವಿನಲ್ಲಿ ನಂಬಿಕೆ ಇರಿಸುತ್ತೇನೆ ಎಂದರು.
ಅಲ್ಲದೆ ನ್ಯಾಯಾಲಯದ ತೀರ್ಪು ಏನೇ ಬಂದರು ಅದನ್ನು ನಾನು ಒಪ್ಪಿಕೊಳ್ಳುತ್ತೇನೆ ಎಂದು ಅವರು ಹೇಳಿದರು.
ಇನ್ನು ಹಿಜಾಬ್ ವಿಚಾರವನ್ನು ವಿರೋಧ ಪಕ್ಷಗಳು ರಾಜಕೀಯಗೊಳಿಸಲು ಬಯಸುತ್ತಿವೆ, ಆದರೆ ಅವರ ಕಾರ್ಯಕ್ಕೆ ಯಶಸ್ಸು ಸಿಗುವುದಿಲ್ಲ ಎಂದು ಹೇಳಿದರು.