ಶಿವಮೊಗ್ಗ, ಫೆ 21 (DaijiworldNews/HR): ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ನಡೆದಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಶಿವಮೊಗ್ಗ ನಗರದ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ನಗರದ ಸೀಗೆಹಟ್ಟಿ ನಿವಾಸಿ ಹರ್ಷ (24) ನ ಮೇಲೆ ಮಾರಕಾಸ್ತ್ರಗಳಿಂದ ಹತ್ಯೆಗೈದು ನಾಲ್ವರು ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ. ಹಲ್ಲೆ ನಡೆಯುತ್ತಿದ್ದಂತೆ ಎರಡು ಗುಂಪುಗಳ ನಡುವೆ ನಗರದಲ್ಲಿ ಕಲ್ಲು ತೂರಾಟ ನಡೆದಿದೆ.
ಇನ್ನು ಈ ವೇಳೆ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ಪೊಲೀಸರು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ನಿಯಂತ್ರಿಸಿದ್ದು, ಈ ಹಿನ್ನೆಲೆ, ಮುನ್ನಚ್ಚರಿಕಾ ಕ್ರಮವಾಗಿ ಇಂದು ನಗರದ ಶಾಲಾ ಕಾಲೇಜುಗಳಿಗೆ ಡಿಸಿ ಡಾ. ಸೆಲ್ವಮಣಿ ರಜೆ ಘೋಷಿಸಿದ್ದು, ಇದೀಗ ನಾಳೆ ಕೂಡ ರಜೆ ಘೋಷಿಸಲಾಗಿದೆ.