ಬೆಂಗಳೂರು, ಫೆ 22 (DaijiworldNews/MS): ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 12 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ 12 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದೆ. ಈ ಪೈಕಿ ನಿನ್ನೆ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.
24 ಗಂಟೆಯಲ್ಲಿ ಪ್ರಕರಣ ಭೇದಿಸಲಾಗಿದೆ. ಹರ್ಷನ ಹತ್ಯೆಯಲ್ಲಿ ಭಾಗಿಯಾಗಿದ್ದ 12 ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ಇನ್ನೂ ಮೂರು ಜನರ ಮೇಲೆ ಗಂಭೀರ ಶಂಕೆ ಇದೆ. ಇಂದು ಮಧ್ಯಾಹ್ನ ಅಥವಾ ಸಂಜೆಯೊಳಗೆ ಸ್ಪಷ್ಟತೆ ಸಿಗಬಹುದು ಎಂದು ಜ್ಞಾನೇಂದ್ರ ತಿಳಿಸಿದ್ದಾರೆ.
ನಗರದ ಸೀಗೆಹಟ್ಟಿ ನಿವಾಸಿ ಹರ್ಷ (24) ನ ಮೇಲೆ ಭಾನುವಾರ ರಾತ್ರಿ ಮಾರಕಾಸ್ತ್ರಗಳಿಂದ ಹತ್ಯೆಗೈದು ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದರು.