ಡೆಹ್ರಾಡೂನ್, ಫೆ 22 (DaijiworldNews/KP): ಮದುವೆ ಸಂಭ್ರಮ ಮುಗಿಸಿ ಹಿಂತಿರುಗುತ್ತಿದ್ದ ವಾಹನವೊಂದು ಆಳವಾದ ಕಮರಿಗೆ ಬಿದ್ದು 11 ಮಂದಿ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿರುವ ದಾರುಣ ಘಟನೆ ಉತ್ತರಖಂಡ್ ರಾಜ್ಯದ ಚಂಪಾವತ್ ಜಿಲ್ಲೆಯ ಸುಖಿಧಾಂಗ್-ದಂಡಮಿನಾರ್ ರಸ್ತೆಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಮೃತರನ್ನು ಚಂಪಾವತ್ ಜಿಲ್ಲೆಯಲ್ಲಿ ತನಕ್ಪುರದ ನಿವಾಸಿಗಳು ಎಂದು ಗುರುತಿಸಲಾಗಿದೆ.
ಇನ್ನು ಚಂಪಾವತ್ ಜಿಲ್ಲೆಯಲ್ಲಿ ಸುಖಿಧಾಂಗ್-ದಂಡಮಿನಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ ಆಗುತ್ತಿದ್ದ ವೇಳೆ ಮ್ಯಾಕ್ಸ್ ವಾಹನ ಆಯತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ ವಾಹನದಲ್ಲಿದ್ದ 16 ಜನರ ಪೈಕಿ 11 ಜನ ಸ್ಥಳದಲ್ಲಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ, ಇನ್ನು ಉಳಿದವರಿಗಾಗಿ ಹುಡುಕಾಟ ಮುಂದುವರೆದಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಚಾಲಕ ಹಾಗೂ ಇತರರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಮೃತರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ಪರಿಹಾರ ಹಾಗೂ ಗಾಯಗೊಂಡವರಿಗೆ ತಲಾ 50,000 ನೆರವನ್ನು ತಮ್ಮ ಟ್ವೀಟರ್ ಮೂಲಕ ಘೋಷಿಸಿದ್ದಾರೆ.