ಬೆಂಗಳೂರು, ಫೆ 23 (DaijiworldNews/KP): ಅಕ್ಷೇಪಾರ್ಹ ಟ್ವೀಟ್ ಮಾಡಿರುವ ಆರೋಪದ ಮೇರೆಗೆ ಸಾಮಾಜಿಕ ಕಾರ್ಯಕರ್ತ ಮತ್ತು ನಟ ಚೇತನ್ನನ್ನು ಮಂಗಳವಾರ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಇನ್ನು ಫೆ.16ರಂದು ಅತ್ಯಾಚಾರ ಪ್ರಕರಣವೊಂದರಲ್ಲಿ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು ಜಾಮೀನು ಮಂಜೂರು ಮಾಡಿದ್ದರು. ಇದೇ ವಿಷಯ ಪ್ರಸ್ತಾಪಿಸಿ ಚೇತನ್ ಅವರು ನ್ಯಾಯಾಂಗ ನಿಂದನೆ ಮಾಡಿರುವ ಆರೋಪದಲ್ಲಿ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು 8ನೇ ಎಸಿಎಂಎಂ ಕೋರ್ಟ್ ಚೇತನ್ ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಈ ಮಧ್ಯೆ, ಚೇತನ್ ಪತ್ನಿ ಮೇಘಾ ಪ್ರತಿಕ್ರಿಯೆ ನೀಡಿದ್ದು, ಚೇತನ್ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಶ್ನಿಸುವ ಅವಕಾಶ ಎಲ್ಲರಿಗೂ ಇದೆ. ಪೊಲೀಸ್, ಜಡ್ಜ್, ಮೋದಿ ಯಾರೇ ಆಗಿರಲಿ ಪ್ರಶ್ನಿಸುವ ಅಧಿಕಾರವಿದೆ. ಯಾವುದೇ ಆಕ್ಷೇಪಾರ್ಹ ಪದಗಳನ್ನ ಬಳಸಿ ಚೇತನ್ ಮಾತನಾಡಿಲ್ಲ. ಅಲ್ಲದೆ ಬಂಧನದ ವಿರುದ್ಧವಾಗಿ ನಾವು ಕಾನೂನು ಹೋರಾಟ ಕೈಗೊಳ್ಳಲಿದ್ದೇವೆ ಎಂದಿದ್ದಾರೆ.