ಶಿವಮೊಗ್ಗ, ಫೆ 23 (DaijiworldNews/HR): ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಇಲ್ಲಿಯವರೆಗೆ 8 ಆರೋಪಿಗಳ್ನು ಬಂಧಿಸಲಾಗಿದ್ದು, ನಗರದಲ್ಲಿ ಶುಕ್ರವಾರದವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಹರ್ಷ ಹತ್ಯೆ ಪ್ರಕರಣದಲ್ಲಿ ಇಂದು ಮತ್ತಿಬ್ಬರು ಸೇರಿದಂತೆ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿಗಳು ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಇದೀಗ ಪೊಲೀಸರ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ತನಿಖೆ ನಡೆಸಿ, ವರದಿ ನೀಡುವಂತೆ ಸೂಚಿಸಲಾಗಿದೆ ಎಂದರು.
ಇನ್ನು ಸಮಾಜಘಾತುಕ ಬೆಳವಣಿಗೆ ಕುರಿತಂತೆ ಪೊಲೀಸರ ಪಾತ್ರದ ಬಗ್ಗೆ ವರದಿ ಕೇಳಿದ್ದು, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಗೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.