ಬೆಂಗಳೂರು, ಫೆ 23 (DaijiworldNews/HR): ಹಿಜಾಬ್ ಧರಿಸಲು ಅನುಮತಿ ಕೋರಿದ್ದ ವಿದ್ಯಾರ್ಥಿಗಳ ಅರ್ಜಿಗಳ ವಿಚಾರಣೆ 10ನೇ ದಿನಕ್ಕೆ ಕಾಲಿಟ್ಟಿದ್ದು, ಕರ್ನಾಟಕ ಹೈಕೋರ್ಟ್ನಲ್ಲಿ ಬುಧವಾರ ವಿಚಾರಣೆ ಆರಂಭವಾಗಿದೆ.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ಪೀಠದಲ್ಲಿ ಒಂದು ವಾರದಿಂದ ಅರ್ಜಿಗಳ ವಿಚಾರಣೆ ನಡೆಯುತ್ತಿದ್ದು, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರು ಪೀಠದಲ್ಲಿದ್ದಾರೆ.
ಮಂಗಳವಾರ ಕರ್ನಾಟಕ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದ ಮಂಡನೆ ಮುಕ್ತಾಯ ಮಾಡಿದ್ದು, ಈ ವಾರದಲ್ಲಿಯೇ ಅರ್ಜಿದಾರರು ವಾದ ಮಂಡನೆ ಪೂರ್ಣಗೊಳಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿಗಳು ಮೌಖಿಕ ಸೂಚನೆ ನೀಡಿದ್ದಾರೆ.