ಬೆಂಗಳೂರು, ಫೆ 24 (DaijiworldNews/HR): ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಇದುವರೆಗಿನ ಎಲ್ಲ ಬೆಳವಣಿಗೆ ಬಗ್ಗೆ ವಿವರಣೆ ನೀಡಿದ್ದು, ಹತ್ಯೆ ವಿಚಾರವಾಗಿ ಸಂಪೂರ್ಣವಾಗಿ ವಿವರ ಕೊಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬೊಮ್ಮಾಯಿ ಅವರನ್ನು ಆರ್ಟಿ ನಗರ ನಿವಾಸದಲ್ಲಿ ಭೇಟಿಯಾಗಿದ್ದು, ಶಿವಮೊಗ್ಗದ ಸದ್ಯದ ಪರಿಸ್ಥಿತಿ ಕುರಿತು ಮಾತುಕತೆ ನಡೆಸಿದ್ದೇನೆ. ಆದರೆ ಹರ್ಷ ಹತ್ಯೆ ವಿಚಾರವಾಗಿ ಸಂಪೂರ್ಣವಾಗಿ ವಿವರ ಕೊಡಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.
ಇನ್ನು ಶಿವಮೊಗ್ಗ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಕಳೆದ ಎರಡು ದಿನಗಳಿಂದ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಹರ್ಷ ಕೊಲೆ ತನಿಖೆ ಪ್ರಗತಿ ಬಗ್ಗೆ ಬೊಮ್ಮಾಯಿ ಅವರಿಗೆ ಆರಗ ಅವರು ವಿಸ್ತ್ರತ ವಿವರಣೆ ನೀಡಿದ್ದಾರೆ ಎಂದು ತಿಳಿಸಿದರು.