ನವದೆಹಲಿ, ಫೆ 24 (DaijiworldNews/HR): ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದ್ದು, ಭಾರತದ ಉಕ್ರೇನ್ ರಾಯಭಾರಿ ಇಗೊರ್ ಪೊಲಿಖಾ ಪ್ರಧಾನಿ ನರೇಂದ್ರ ಮೋದಿಯವರ ಮಧ್ಯಸ್ಥಿಕೆಯನ್ನು ಕೋರಿದ್ದಾರೆ ಎಂದು ವರದಿಯಾಗಿದೆ.
ಭಾರತವು ರಷ್ಯಾದೊಂದಿಗೆ ವಿಶೇಷ ಸಂಬಂಧವನ್ನು ಹೊಂದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ನವದೆಹಲಿ ಹೆಚ್ಚು ಸಕ್ರಿಯ ಪಾತ್ರ ವಹಿಸುತ್ತದೆ ಎಂದು ಉಕ್ರೇನ್ ರಾಯಭಾರಿ ಹೇಳಿದ್ದಾರೆ.
ಇನ್ನು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ನಮ್ಮ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯನ್ನು ತಕ್ಷಣವೇ ಸಂಪರ್ಕಿಸುವಂತೆ ನಾವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇವೆ ಎಂದು ಇಗೊರ್ ಪೊಲಿಖಾ ಹೇಳಿದ್ದಾರೆ.
ಎಷ್ಟು ವಿಶ್ವ ನಾಯಕರ ಮಾತನ್ನು ಪುಟಿನ್ ಕೇಳುತ್ತಾರೆಂದು ನನಗೆ ತಿಳಿದಿಲ್ಲ, ಆದರೆ ಮೋದಿಯವರ ಬಗ್ಗೆ ನನಗೆ ಭರವಸೆ ಮೂಡಿಸಿದೆ ಎಂದಿದ್ದಾರೆ.