ನವದೆಹಲಿ, ಫೆ. 24 (DaijiworldNews/SM): ಉಕ್ರೇನ್ ನಲ್ಲಿ ರಷ್ಯಾ ಯುದ್ಧಕ್ಕೆ ಮುಂದಾದ ಬಳಿಕ ರಕ್ತಪಾತವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಯುದ್ಧದಿಂದ ತಕ್ಷಣ ಹಿಂದೆ ಸರಿಯುವಂತೆ ರಷ್ಯಾ ಅಧ್ಯಕ್ಷರಲ್ಲಿ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿಕೊಂಡಿದ್ದಾರೆ.
ರಷ್ಯಾ ಅಧ್ಯಕ್ಷ ಪುಟಿನ್ ಗೆ ದೂರವಾಣಿ ಕರೆ ಮಾಡಿ ಮನವಿ ಮಾಡಿಕೊಂಡಿರುವ ಪ್ರಧಾನಿ ಮೋದಿ, ಯುದ್ಧದಿಂದ ತಕ್ಷಣ ಹಿಂದೆ ಸರಿಯಬೇಕು. ಹಾಗೂ ಮಾತುಕತೆಯ ಮೂಲಕ ವಿವಾದವನ್ನು ಬಗೆಯರಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.