ಬೆಂಗಳೂರು, ಫೆ 25 (DaijiworldNews/HR): ಉಕ್ರೇನ್ ಮತ್ತು ರಷ್ಯಾ ಬಿಕ್ಕಟ್ಟಿನ ನಡುವೆ ಕರ್ನಾಟಕದ ವಿವಿಧ ಜಿಲ್ಲೆಯ 91 ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ.
ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ 91 ವಿದ್ಯಾರ್ಥಿಗಳು ಉಕ್ರೇನ್ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೋಡಲ್ ಅಧಿಕಾರಿ ಡಾ ಮನೋಜ್ ರಾಜನ್ ಅವರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಖಾರಿವ್ ನ್ಯಾಷನಲ್ ಮೆಡಿಕಲ್ ವಿವಿಯ ವಿದ್ಯಾರ್ಥಿಗಳು ಸೇರಿದಂತೆ ಕೆಲವು ಕನ್ನಡಿಗ ವಿದ್ಯಾರ್ಥಿಗಳು ಉಕ್ರೇನ್ನಲ್ಲಿ ಕರುನಾಡಿಗೆ ಬರಲು ಹರಸಾಹಸ ಪಡುತ್ತಿದ್ದಾರೆ.
ಇನ್ನು ವಿದ್ಯಾರ್ಥಿಗಳು ರಕ್ಷಣೆಗೆ ಮೊರೆ ಹಿಡುತ್ತಿದ್ದು, ಕೆಲವರು ಬಂಕರ್ಸ್ಗಳಲ್ಲಿ ರಕ್ಷಣೆ ಪಡೆದಿದ್ದಾರೆ. ರಾಜ್ಯದಲ್ಲಿ ಪೋಷಕರು ತಮ್ಮ ಮಕ್ಕಳ ಯೋಗಕ್ಷೇಮದ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ.