ಬೆಂಗಳೂರು, ಫೆ 25 (DaijiworldNews/HR): ಹಿಜಾಬ್ ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು 12ನೇ ದಿನ ಇಂದು ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಜೆ ಎಂ ಖಾಜಿ ಅವರ ಪೂರ್ಣ ಪೀಠವು ಇಂದು ವಾದ ಹಾಗೂ ಪ್ರತಿವಾದಿಗಳಿಗೆ ಲಿಖಿತ ವಾದವನ್ನು ಸಲ್ಲಿಸುವಂತೆ ತಿಳಿಸಿದ್ದು ತೀರ್ಪನ್ನು ಕಾಯ್ದಿರಿಸಿದೆ.
ಇನ್ನು ಕಳೆದ 2 ವಾರದಿಂದ ಸುಧೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿದಾರರ ಹಾಗೂ ಸರ್ಕಾರಿ ವಕೀಲರ ವಾದವನ್ನು ಆಲಿಸಿ ಹಿಂದೆ ತಮ್ಮ ಎಲ್ಲಾ ಹೇಳಿಕೆಗಳನ್ನು ಲಿಖಿತ ಮೂಲಕ ದಾಖಲಿಸಿ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ.