ಯಾದಗಿರಿ, ಫೆ 25 (DaijiworldNews/HR): ಯಾದಗಿರಿಯ ದೋರೆನಹಳ್ಳಿ ಕ್ಯಾಂಪ್ನಲ್ಲಿ ಸೀಮಂತ ಕಾರ್ಯಕ್ರಮದ ಸಂದರ್ಭದಲ್ಲಿಯೇ ಸಿಲಿಂಡರ್ ಸ್ಪೋಟಗೊಂಡು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅದರಲ್ಲಿ 8 ಜನರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.
ಶುಕ್ರವಾರ ಮಧ್ಯಾಹ್ನ 2.30ರ ಸಮಯದಲ್ಲಿ ಸೀಮಂತ ಕಾರ್ಯಕ್ರಮದಲ್ಲಿ ಅಡುಗೆ ಮಾಡೋದಕ್ಕೆ ಬಳಸಲಾಗುತ್ತಿದ್ದಂತ ಸಿಲಿಂಡರ್ ಸ್ಪೋಟಗೊಂಡಿದ್ದು, ಸಿಲಿಂಡಲ್ ಬ್ಲಾಸ್ಟ್ ನಿಂದಾಗಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಇನ್ನು ಈ ಘಟನೆಯ ನಂತ್ರ, ಗಾಯಾಳುಗಳನ್ನು ಶಹಪೂರದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. 20 ಜನರಲ್ಲಿ 8 ಮಂದಿ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ.
ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.