ಮಸ್ಕಿ, ಫೆ 26 (DaijiworldNews/MS): ಶಾಲೆಯಿಂದ ವಾಪಸಾಗುತ್ತಿದ್ದ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕುವಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಪಟ್ಟಣದ ಸಾನಬಾಳ ರಸ್ತೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಕೊಲೆಯಾದ ವಿದ್ಯಾರ್ಥಿನಿ ಭೂಮಿಕಾ (15) ಎಂದು ಗುರುತಿಸಲಾಗಿದೆ.
ಮಸ್ಕಿ ಪಟ್ಟಣದ ಸಾನಬಾಳ ರಸ್ತೆಯಲ್ಲಿ ಚಾಕುವಿನಿಂದ ಹೊಟ್ಟೆ ಭಾಗಕ್ಕೆ ಇರಿದು 15 ವರ್ಷದ ಭೂಮಿಕಾ ಎಂಬ 9ನೇ ತರಗತಿಯ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಶಾಲೆಯಿಂದ ಮನೆಗೆ ವಾಪಸಾಗುತ್ತಿದ್ದ ವೇಳೆ ಅಡ್ಡಗಟ್ಟಿ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಭೂಮಿಕಾಳನ್ನು ಹತ್ಯೆಗೈಯಲಾಗಿದೆ.
ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪಿಎಸ್ ಐ ಸಿದ್ಧರಾಮ ಬಿದರಾಣಿ ಭೇಟಿ ನೀಡಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ.
ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮಸ್ಕಿ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.