ರಾಮನಗರ, ಫೆ 26 (DaijiworldNews/KP), ನಗರದ ಬೈರವನದೊಡ್ಡಿ ಸಮೀಪ ತೋಟದ ಮನೆಯಲ್ಲಿ ಬಿಡದಿ ಕಾಂಗ್ರೆಸ್ ಮುಖಂಡ ಗಂಟಪ್ಪ (60) ಎಂಬುವರನ್ನು ದುಷ್ಕರ್ಮಿಗಳು ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಬಾನಂದೂರು ನಿವಾಸಿಯಾದ ಗಂಟಪ್ಪ ಅವರು ತಮ್ಮ ತೋಟದಲ್ಲಿ ಬೈಕ್ ಸರ್ವೀಸ್ ಸ್ಟೇಷನ್ ನಡೆಸುತ್ತಿದ್ದು, ನಿನ್ನೆ ರಾತ್ರಿ ಅಲ್ಲಿಯೇ ಇದ್ದರು. ಈ ವೇಳೆ ದುಷ್ಕರ್ಮಿಗಳ ತಂಡ ಹೊಟ್ಟೆ ಹಾಗೂ ಕುತ್ತಿಗೆಗೆ ಇರಿದು ಹತ್ಯೆ ಮಾಡಿ ಪರಾರಿ ಆಗಿದ್ದಾರೆ.
ಸದ್ಯ ಮೃತದೇಹವನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಇನ್ನು ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಈ ಸಂಬಂಧ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಲ್ಲದೆ ಪೊಲೀಸರು ತನಿಖೆಯಿಂದಷ್ಟೇ ಕೊಲೆಗೆ ನಿಖರವಾದ ಕಾರಣ ತಿಳಿದು ಬರಬೇಕಿದೆ.