ಬೆಂಗಳೂರು, ಫೆ 26 (DaijiworldNews/HR): ನಾವು ಭಾರತೀಯ ವಿದೇಶಾಂಗ ಸಚಿವಾಲಯದೊಂದಿಗೆ ಸಂಪರ್ಕದಲ್ಲಿದ್ದು, ಉಕ್ರೇನ್ ನಲ್ಲಿರುವಂತ ಕರ್ನಾಟಕದ ವಿದ್ಯಾರ್ಥಿಗಳ ಪಟ್ಟಿಯನ್ನು ಕಳುಹಿಸಿಕೊಡಲಾಗಿದೆ. ಸುರಕ್ಷಿತವಾಗಿ ಅವರನ್ನು ಕರೆತರುವಂತ ಎಲ್ಲಾ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್ನಲ್ಲಿರುವ ಕರ್ನಾಟಕದ ವಿದ್ಯಾರ್ಥಿಗಳ ಪಟ್ಟಿಯನ್ನು ವಿದೇಶಾಂಗ ಸಚಿವಾಲಯಕ್ಕೆ ಕಳುಹಿಸಿಕೊಡಲಾಗಿದ್ದು, ಅವರನ್ನು ಉಕ್ರೇನ್ ನಿಂದ ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರುವ ಪ್ರಯತ್ನದಲ್ಲಿ ನಾವಿದ್ದೇವೆ ಎಂದಿದ್ದಾರೆ.
ಇನ್ನು ಭಾರತೀಯರನ್ನು ಉಕ್ರೇನ್ ನ ಪಶ್ಚಿಮ ಭಾಗದಿಂದ ರೊಮೇನಿಯಾದ ಮೂಲಕ ಭಾರತಕ್ಕೆ ಕರೆತರುವ ಪ್ರಯತ್ನವನ್ನು ಭಾರತ ಸರ್ಕಾರ ನಡೆಸುತ್ತಿದ್ದು, ಎಲ್ಲರನ್ನು ಸುರಕ್ಷಿತವಾಗಿ ಕರೆತರುವ ಪ್ರಯತ್ನ ನಡೆದಿದೆ. ಯಾರೂ ಆತಂಕಕ್ಕೆ ಒಳಗಾಗ ಬಾರದು ಎಂದು ಹೇಳಿದ್ದಾರೆ.