ಬೆಂಗಳೂರು, ಫೆ 26 (DaijiworldNews/HR): ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 514 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39,40,429ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, 1073 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಗುಣಮುಖರಾದವರ ಒಟ್ಟು ಸಂಖ್ಯೆ 38,93, 532ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಶನಿವಾರ 19 ಜನರು ಕೊರೋನಾದಿಂದ ಮೃತಪಟ್ಟಿದ್ದು, ಇದರೊಂದಿಗೆ ಈವರೆಗೂ ಮೃತಪಟ್ಟವರ ಒಟ್ಟು ಸಂಖ್ಯೆ 39, 919ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇಕಡಾ 0.84, ಮರಣ ಪ್ರಮಾಣ ಶೇ. 3.69ರಷ್ಟಿದೆ.
ಇನ್ನು ಬಾಗಲಕೋಟೆ, ಗದಗ್, ಹಾವೇರಿ, ಮಂಡ್ಯ, ರಾಯಚೂರು, ರಾಮನಗರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.