ಚಿತ್ರದುರ್ಗ, ಫೆ 27 (DaijiworldNews/HR): ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಿಗೆ ತಮ್ಮ ಶಕ್ತಿ ಏನೆಂದು ತೋರಿಸಲು ಮೇಕೆದಾಟು ಪಾದಯಾತ್ರೆ ನಡೆಸುತ್ತಿದ್ದಾರೆ. ಇದು ಕಾಂಗ್ರೆಸ್ ನಡೆಸುತ್ತಿರುವ 'ಡ್ರಾಮಾ ಪಾರ್ಟ್-2' ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರವೂ ಮೇಕೆದಾಟು ಯೋಜನೆಯನ್ನು ಜಾರಿಗೊಳಿಸುವುದಿಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಅದು ತಾಂತ್ರಿಕ ಕಾರಣದಿಂದ ಸ್ಥಗಿತಗೊಂಡಿದೆ. ಆದರೆ ಮಾಡಲು ಕೆಲಸವಿಲ್ಲದ ಕಾಂಗ್ರೆಸ್ನವರು ಈಗ ಸುಖಾಸುಮ್ಮನೆ ಪಾದಯಾತ್ರೆ ಮಾಡುತ್ತಿದ್ದಾರೆ ಎಂದರು.
ಇನ್ನು ಜನರ ಬಗ್ಗೆ ಕಾಳಜಿಯಿಲ್ಲದ ಕಾಂಗ್ರೆಸ್ನವರು ಆರು ದಿನ ಅಧಿವೇಶನದ ಸಮಯ ಹಾಳು ಮಾಡಿದ್ದಾರೆ. ಅವರಿಗೆ ನಿಜಕ್ಕೂ ಜವಾಬ್ದಾರಿ ಇದ್ದಿದ್ದರೆ ಸದನ ಒಳಗೆ ಜನರ ಸಮಸ್ಯೆ ಬಗ್ಗೆ ಚರ್ಚೆ ನಡೆಸಿ ಹೊರಗೆ ಧರಣಿ ನಡೆಸುತ್ತಿದ್ದರು ಎಂದು ವಾಗ್ದಾಳಿ ನಡೆಸಿದರು.