ಲಖನೌ, ಫೆ 27 (DaijiworldNews/KP): ಉತ್ತರ ಪ್ರದೇಶದ ಮಹಿಳೆಯರು ಹಾಗೂ ಹೆಣ್ಣು ಮಕ್ಕಳ ನೋವನ್ನು ಅರ್ಥ ಮಾಡಿಕೊಳ್ಳುವುದರಲ್ಲಿ ಸಿಎಂ ಯೋಗಿ ಸಂಪೂರ್ಣ ವಿಫಲರಾಗಿದ್ದಾರೆ. ಅವರು ತೀರ್ಥಯಾತ್ರೆಗೆ ಹೋಗುವುದು ಉತ್ತಮ ಎಂದು ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಹೇಳಿದ್ದಾರೆ.
ಉತ್ತರ ಪ್ರದೇಶ ಚುನಾವಣೆ ಪ್ರಯುಕ್ತ ನಡೆದ ಸಮಾವೇಶದಲ್ಲಿ ಅವರು, ಯೋಗಿ ಆಡಳಿತದಲ್ಲಿ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಅತಿ ಹೆಚ್ಚು ಅಪರಾಧ ಪ್ರಕರಣಗಳು ನಡೆದಿವೆ ಎಂದು ಎನ್.ಸಿ.ಆರ್.ಬಿ ಹೇಳಿದೆ. ಇದು ಅತ್ಯಂತ ನಾಚಿಕೆಗೇಡಿನ ವಿಷಯ' ಎಂದು ಜಯಾ ಬಚ್ಚನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಂದು ಬ್ರಿಟಿಷರು ಭಾರತಕ್ಕೆ ಬಂದು ಇಲ್ಲಿನ ಸಂಪತ್ತನ್ನು ದೋಚಿಕೊಂಡು ಹೋದರು. ಈಗ ಅಧಿಕಾರ ನಡೆಸುತ್ತಿರುವವರು ಬ್ರಿಟಿಷರ ಮತ್ತೊಂದು ರೂಪ ಎಂದು ಹೇಳಿದ್ದಾರೆ.
ಇನ್ನು ಈಗ ಉತ್ತರಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷವು ಮಹಿಳೆಯರ ಸುರಕ್ಷತೆ ಹಾಗೂ ಅಭಿವೃದ್ಧಿಯ ಬಗ್ಗೆ ಯಾವುದೆ ಕ್ರಮ ಕೈಗೊಂಡಿಲ್ಲ ಎಂದು ಯೋಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.