ಶಿವಮೊಗ್ಗ, ಫೆ 27 (DaijiworldNews/HR): ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ನಡೆದ ಬಳಿಕ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಿ ಶಾಲೆ, ಕಾಲೇಜಿಗಳಿಗೆ ರಜೆ ಘೋಷಿಸಲಾಗಿದ್ದು, ಇದೀಗ ನಾಳೆಯಿಂದ ಶಾಲಾ, ಕಾಲೇಜು ಪುನರಾರಂಭಕ್ಕೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ.
ಈ ಕುರಿತು ಆದೇಶ ಹೊರಡಿಸಿರುವಂತ ಅವರು, ನಾಳೆಯಿಂದ ನಗರದಲ್ಲಿ ಶಾಲಾ-ಕಾಲೇಜುಗಳ ಪುನರಾರಂಭಕ್ಕೆ ಸೂಚಿಸಿದ್ದಾರೆ. ಈ ಮೂಲಕ ಕಳೆದ ಒಂದು ವಾರದಿಂದ ಬಂದ್ ಆಗಿದ್ದಂತ ಶಾಲಾ-ಕಾಲೇಜುಗಳು ನಾಳೆಯಿಂದ ಪುನರಾರಂಭಗೊಳ್ಳಲಿವೆ ಎಂದಿದ್ದಾರೆ.
ಇನ್ನು ಬಜರಂಗದಳದ ಕಾರ್ಯಕರ್ತ ಹರ್ಷ ಕಳೆದ ಭಾನುವಾರದಂದು ಹತ್ಯೆಯಾಗಿದ್ದು, ಈಗಾಗಲೇ ಈ ಸಂಬಂಧ 11 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣ ಆರೋಪಿಗಳನ್ನು ಪೊಲೀಸರು ತನಿಖೆಗೂ ಒಳಪಡಿಸುತ್ತಿದ್ದಾರೆ.