ಬೆಂಗಳೂರು, ಫೆ 27 (DaijiworldNews/KP): ಕನ್ನಡದ ಮೇರು ನಟ ದಿ. ಪುನೀತ್ ರಾಜ್ ಕುಮಾರ್ಗೆ 'ಕರ್ನಾಟಕ ರತ್ನ' ಪ್ರಶಸ್ತಿ ಪ್ರದಾನ ದಿನಾಂಕವನ್ನು ಶೀಘ್ರದಲ್ಲಿ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಕಂಠೀರವ ಸ್ಟುಡಿಯೋದಲ್ಲಿ ನಟ ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಬಳಿಕ ಮಾತನಾಡಿದ ಅವರು, ಪುನೀತ್ ಅವರ ಸ್ಮಾರಕವನ್ನು ಸದ್ಯದಲ್ಲಿಯೇ ನಿರ್ಮಿಸಲಾಗುವುದು ಹಾಗೂ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ದಿನಾಂಕವನ್ನೂ ಘೋಷಿಸಲಾಗುವುದು ಎಂದರು.
ಇನ್ನು ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕುವ ಮೂಲಕ ಸಣ್ಣ ಕೃತಜ್ಞತೆ ಹೇಳುವ ಭಾಗ್ಯ ದೊರೆಕಿದೆ. ಅವರು ಎಲ್ಲೇ ಇದ್ದರೂ ನಮ್ಮನ್ನು ನೆನೆಸಿಕೊಳ್ಳುತ್ತಾರೆ ಎಂದು ಹೇಳಿದರು.