ಉತ್ತರಪ್ರದೇಶ, ಫೆ. 27 (DaijiworldNews/SM): ಭಾರತೀಯರನ್ನು ಸುರಕ್ಷಿತವಾಗಿ ಕರೆ ತರಲು ಅವಿರತ ಶ್ರಮ ವಹಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ ಅವರು, ಈ ವಿಚಾರ ತಿಳಿಸಿದ್ದಾರೆ. ಅಲ್ಲದೆ, ದೇಶವನ್ನು ಆತ್ಮನಿರ್ಭರ್ ಮಾಡುವ ಮೂಲಕ ಬಲಪಡಿಸಲಾಗುತ್ತಿದೆ ಎಂದರು. ಉಕ್ರೇನ್ನಲ್ಲಿ ಸಿಲುಕಿಕೊಂಡಿರುವ ಭಾರತೀಯರ ಸುರಕ್ಷಿತ ಸ್ಥಳಾಂತರ ಕಾರ್ಯ ಆರಂಭಗೊಂಡಿದ್ದು, ಪ್ರಗತಿಯಲ್ಲಿದೆ. ನಾಗರಿಕ ವಿಮಾನ ಕಾರ್ಯಾಚರಣೆಗಳಿಗಾಗಿ ಉಕ್ರೇನ್ ವಾಯುಪ್ರದೇಶವನ್ನು ಮುಚ್ಚಿರುವುದರಿಂದ ಸ್ಥಳಾಂತರ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದರು.
ಜಾತಿ ಮತ್ತು ಧರ್ಮದ ಅಡೆತಡೆಗಳನ್ನು ಮೀರಿ ದೇಶವನ್ನು 'ಆತ್ಮನಿರ್ಭರ್' ಮಾಡುವ ಮೂಲಕ ಬಲಪಡಿಸುವ ಸಮಯ ಬಂದಿದೆ ಎಂದರು.