ಗದಗ, ಮಾ 01 (DaijiworldNews/HR): ಕಾಂಗ್ರೆಸ್ನವರಿಗೆ ಯಾವುದೇ ವಿಷಯವಿಲ್ಲ ಹೀಗಾಗಿ ರಾಜಕಾರಣಕ್ಕಾಗಿ ಮೇಕೆದಾಟು ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಆರೋಪಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರಿಗೆ ಯಾವುದೇ ವಿಷಯವಿಲ್ಲ ಹೀಗಾಗಿ ರಾಜಕಾರಣಕ್ಕಾಗಿ ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದಾರೆ. ಮೇಕೆದಾಟು ಯೋಜನೆ ಇಂದು ನಿನ್ನೆಯದಲ್ಲ. ಆದರೆ ಹಲವು ಕಾರಣಗಳಿಂದಾಗಿ ಈವರೆಗೆ ಅನುಷ್ಠಾನಗೊಂಡಿಲ್ಲ ಎಂದರು.
ಇನನು ಕರ್ನಾಟಕ ಸೇರಿದಂತೆ ಆಂಧ್ರಪ್ರದೇಶ, ತಮಿಳುನಾಡು, ಕೇರಳ ಹಾಗೂ ಉತ್ತರ ಭಾರತದ ಎಲ್ಲ ರಾಜ್ಯಗಳ ಮಕ್ಕಳು ಉಕ್ರೇನ್ ನಲ್ಲಿ ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಲು ಭಾರತ ಸರಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎಂದಿದ್ದಾರೆ.