ಬೆಂಗಳೂರು,ಮಾ 01 (DaijiworldNews/HR): ಉಕ್ರೇನ್ನಿಂದ ಕರ್ನಾಟಕದವರನ್ನು ಕರೆತರುವ ಪ್ರಯತ್ನ ನಿರಂತರವಾಗಿ ನಡೇಯುತ್ತಿದ್ದು, ಮುಂಬೈ ಹಾಗೂ ನವದೆಹಲಿಗೆ ಬರುತ್ತಿರುವ ವಿದ್ಯಾರ್ಥಿಗಳನ್ನು ಅವರ ಊರುಗಳಿಗೆ ಕಳುಹಿಸಲು ನೆರವು ಒದಗಿಸಲು ಮುಂಬೈನಲ್ಲಿ ಇಬ್ಬರು ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್ನ ಈಶಾನ್ಯ ಭಾಗದಲ್ಲಿರುವ ಕನ್ನಡದ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದು, ವಿದೇಶಾಂಗ ಸಚಿವರೊಂದಿಗೆ ಮಾತನಾಡಿ ಅವರಿಗೆ ಊಟ ವಸತಿ ವ್ಯವಸ್ಥೆ ಮಾಡಲು ಹಾಗೂ ಅವರನ್ನು ಸುರಕ್ಷಿತ ಸ್ಥಳಗಳಿಗಳಿಗೆ ಕಳುಹಿಸಲು ಮಾರ್ಗದರ್ಶನ ನೀಡುವಂತೆ ಕೋರಲಾಗಿದೆ ಎಂದರು.
ಇನ್ನು ರೋಮಾನಿಯಾ ಗಡಿಯಲ್ಲಿ ದಟ್ಟಣೆ ಯಾಗುತ್ತಿದ್ದು, ಕನ್ನಡಿಗರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲು ಕೋರಲಾಗಿದೆ. ಜೊತೆಗೆ ಭಾರತ ಸರ್ಕಾರ ಎಲ್ಲಾ ಭಾರತೀಯರನ್ನು ತಾಯ್ನಾಡಿಗೆ ಮರಳಿಸುವ ಪ್ರಯತ್ನದಲ್ಲಿ ನಿರತವಾಗಿದೆ ಎಂದಿದ್ದಾರೆ.