ಶಿವಮೊಗ್ಗ, ಮಾ 01 (DaijiworldNews/HR): ಹಿಜಾಬ್ ಧರಿಸಿ ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಒಟ್ಟು 43 ಮುಸ್ಲಿಂ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ, 10 ಮಂದಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಬಹಿಷ್ಕರಿಸಿದ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ನಾಗರಾಜ್ ಕಾಗಲ್ಕರ್ ಮಾಹಿತಿ ನೀಡಿದ್ದು, ಸೋಮವಾರದಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿದ್ದು, ಭದ್ರಾವತಿ ನ್ಯೂಟೌನ್ ಬಾಲಕಿಯರ ಕಾಲೇಜಿನ 15 ವಿದ್ಯಾರ್ಥಿಗಳು ಮತ್ತು ಶಿರಾಳಕೊಪ್ಪದ ಬಾಲಕಿಯರ ಪಿಯು ಕಾಲೇಜಿನ 28 ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದ್ದಾರೆ ಎಂದರು.
ಇನ್ನು 10 ವಿದ್ಯಾರ್ಥಿಗಳು ತಮ್ಮ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಬಹಿಷ್ಕರಿಸಿ ಮನೆಗೆ ಹಿಂದಿರುಗಿದ್ದಾರೆ ಎಂದು ತಿಳಿಸಿದ್ದಾರೆ.