ಮುಂಬೈ, ಮಾ 01 (DaijiworldNews/HR): ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಸಚಿವ ಹಾಗೂ ಎನ್ಸಿಬಿ ನಾಯಕ ನವಾಬ್ ಮಲ್ಲಿಕ್ ತಮ್ಮ ವಿರುದ್ಧದ ಪ್ರಕರಣವನ್ನು ವಜಾಗೊಳಿಸುವಂತೆ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ತಿಳಿದು ಬಂದಿದೆ.
ದಾವುದ್ ಇಬ್ರಾಹಿಂ ಜತೆಗಿನ ಹಣಕಾಸು ವಹಿವಾಟು ಸಂಬಂಧ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದ್ದು, ನವಾಬ್ ಮಲ್ಲಿಕ್ನನ್ನು ಬಂಧಿಸಿತ್ತು.
ಇನ್ನು ಈ ಪ್ರಕರಣ ಆಧಾರ ರಹಿತ ಮತ್ತು ರಾಜಕೀಯ ಪ್ರೇರಿತವಾಗಿದ್ದು, ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ಅನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿದ್ದಾರೆ.
ದಾಹುದ್ ಇಬ್ರಾಹಿಂ ಅವರ ಸಹೋದರಿ ಹಸೀನಾ ಪಾರ್ಕರ್ ಅವರ ಮನೆಯ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ ಜಾರಿ ನಿರ್ದೇಶನಾಲಯ ಅಲ್ಲಿ ದೊರೆತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದೆ.