ವಿಜಯಪುರ, ಮಾ 03 (DaijiworldNews/HR): ಕಳೆದ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ನಿರಾಣಿ 2 ಕೋಟಿ ರೂ. ಖರ್ಚು ಮಾಡಿದ್ದಾರೆ ಎಂದು ಮ್ಮದೇ ಪಕ್ಷದ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ಯತ್ನಾಳ್, ಕಳೆದ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಮುರುಗೇಶ್ ನಿರಾಣಿ 2 ಕೋಟಿ ರೂ. ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಇನ್ನು ವಿಜಯಪುರದಲ್ಲಿ 20 ಸಾವಿರ ಗಾಣಿಗ ಮತದಾರರಿದ್ದಾರೆ. ಹೀಗಾಗಿ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿಯನ್ನು ಚುನಾವಣೆಯಲ್ಲಿ ನಿಲ್ಲಿಸಿ, ನನ್ನನ್ನು ಸೋಲಿಸಲು ಯತ್ನಿಸಿದ್ದಾರೆ ಎಂದರು.
ಯತ್ನಾಳ್ ಅವರನ್ನು ಸೋಲಿಸಿದರೆ ಪಂಚಮಸಾಲಿ ಸಮುದಾಯದವರಾಗಿ ಮುಖ್ಯಮಂತ್ರಿ ಆಗಬಹುದು ಎಂಬ ಕನಸು ಕಾಣುತ್ತಿದ್ದಾರೆ ನಿರಾಣಿ ಎಂದು ಗುಡುಗಿದ್ದಾರೆ.