ಬೆಂಗಳೂರು, ಮಾ 03 (DaijiworldNews/HR): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರಂದು 2022-23ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4ರ ಮಧ್ಯಾಹ್ನ 12.30ಕ್ಕೆ ಬಜೆಟ್ ಮಂಡನೆ ಮಾಡಲಿದದು, ರಾಜ್ಯದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ಇರುವುದರಿಂದ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆ ಇದೆ.
ಮುಖ್ಯಮಂತ್ರಿಗಳು ತಮ್ಮ ಬಜೆಟ್ನಲ್ಲಿ 5 ಕ್ಷೇತ್ರಗಳಿಗೆ ಆದ್ಯತೆ ನೀಡುವ ನಿರೀಕ್ಷೆ ಇದ್ದು, ಕೃಷಿ, ರೈತರ ಕಲ್ಯಾಣ ಮತ್ತು ನಡೆಯುತ್ತಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವ ಕಡೆ ಗಮನಹರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನು ಕರ್ನಾಟಕ ಬಜೆಟ್ನ ಗಾತ್ರ 2.50 ಲಕ್ಷ ಕೋಟಿ ದಾಟಲಿದೆ ಎಂದು ಅಂದಾಜಿಸಲಾಗಿದ್ದು, ಬಜೆಟ್ನಲ್ಲಿ ಯಾವ ಹೊಸ ಯೋಜನೆ ಘೋಷಣೆಯಾಗಲಿದೆ ಎಂಬುದನ್ನು ಮುಖ್ಯಮಂತ್ರಿಗಳು ಸುಳಿವು ಬಿಟ್ಟುಕೊಟ್ಟಿಲ್ಲ.