ಬೆಂಗಳೂರು, ಮಾ 03 (DaijiworldNews/HR): ಉಕ್ರೇನ್ನಲ್ಲಿ ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಕನ್ನಡಿಗರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದ್ದು, ಈ ವೇಳೆ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ.
ವಿದ್ಯಾರ್ಥಿಗಳು ಉಕ್ರೇನ್ನಲ್ಲಿ ತಮ್ಮ ಪರಿಸ್ಥಿತಿಯನ್ನು ವಿವರಿಸಿದ್ದು, ಅವರಿಗೆ ಧೈರ್ಯ ತುಂಬಿದ ಬೊಮ್ಮಾಯಿ, ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ಜತೆ ಮಾತನಾಡುತ್ತೇನೆ. ನಿಮಗೆ ಎಲ್ಲಾ ರೀತಿಯ ಸಹಕಾರ ಸಿಗುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ ಎಂದರು.
ಇನ್ನು ನಿಮಗೆ ಎಲ್ಲ ರೀತಿಯ ಸಹಕಾರ ಸಿಗುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದ್ದು, ನಿಮ್ಮನ್ನು ಅಲ್ಲಿಂದ ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.