ಮುಂಬೈ, ಮಾ 03 (DaijiworldNews/HR): ಮಹಾರಾಷ್ಟ್ರ ಕ್ಯಾಬಿನೆಟ್ ಸಚಿವ ಮತ್ತು ಎನ್ ಸಿಪಿ ನಾಯಕ ನವಾಬ್ ಮಲಿಕ್ ಅವರನ್ನು ಮುಂಬೈಯ ವಿಶೇಷ ಪಿಎಂಎಲ್ಎ ನ್ಯಾಯಾಲಯವು ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಮಾರ್ಚ್ 7ರವರೆಗೆ ವಿಸ್ತರಿಸಿ ಆದೇಶ ನೀಡಿದೆ.
ದಾವೂದ್ ಇಬ್ರಾಹಿಂ ನ ಕುಟುಂಬ ಸದಸ್ಯರೊಂದಿಗೆ ಆಸ್ತಿ ವ್ಯವಹಾರ ನಡೆಸಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಫೆಬ್ರವರಿ 23ರಂದು ಮಹಾರಾಷ್ಟ್ರದ ಸಚಿವ ನವಾಬ್ ಮಲ್ಲಿಕ್ ಅವರನ್ನು ಬಂಧಿಸಿದ್ದು, ಈ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿ ಅವರಿಗೆ ಮಾರ್ಚ್ 3ರ ಇಂದಿನವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿತ್ತು.
ಇನ್ನು ಇಂದು ನವಾಬ್ ಮಲ್ಲಿಕ್ ಇಡಿ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ, ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಮಾರ್ಚ್ 7ರವರೆಗೆ ವಿಸ್ತರಿಸಿ ಆದೇಶ ನೀಡಿದೆ.