ಬೆಂಗಳೂರು, ಮಾ 04 (DaijiworldNews/DB): ಸುಳ್ಳು ಹೇಳಿ ಮುಖ್ಯಮಂತ್ರಿ ಆಗುವ ಆಸೆ ನನಗಿಲ್ಲ. ಅದನ್ನು ನನ್ನ ಜೀವನದಲ್ಲಿ ಎಂದಿಗೂ ಮಾಡಿಲ್ಲ. ಕಾಂಗ್ರೆಸ್ ನಾಯಕರೇ ಸುಳ್ಳು ಹೇಳಿ ಅಧಿಕಾರಕ್ಕೆ ಬಂದವರು ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಕಚೇರಿಯಲ್ಲಿರುವ ಕಾಗದ ಪತ್ರಗಳನ್ನುತಂದು ಮಾತನಾಡಿರುವುದಲ್ಲ. ಕಾಂಗ್ರೆಸ್ ಅಧಿಕಾರಾವಧಿಯಲ್ಲಿನ ದಾಖಲೆಗಳನ್ನೇ ಬಹಿರಂಗಪಡಿಸಿದ್ದೇನೆ ಎಂದು ಅವರು ತಿಳಿಸಿದರು.
ಕೂಡಲಸಂಗಮದಲ್ಲಿ ಆಣೆ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನವರು ಜನರಿಗೆ ಮೋಸ ಮಾಡಿದ್ದಾರೆ. ಈಗ ಅಧಿಕಾರಕ್ಕಾಗಿ ಕಾವೇರಿ ಕೊಳ್ಳದ ಜನರಿಗೆ ಮೋಸ ಮಾಡುತ್ತಿದ್ದಾರೆ. ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿರುವುದು ಅವರೇ ಹೊರತು ನಾನಲ್ಲ ಎಂದರು.