ಬೆಂಗಳೂರು, ಮಾ 04 (DaijiworldNews/HR): ರಾಜ್ಯ ಬಜೆಟ್ ಇಂದು ಮಂಡನೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಮಧ್ಯಾಹ್ನ 12.30ಕ್ಕೆ ಬಜೆಟ್ ಮಂಡನೆ ಆರಂಭವಾಗಲಿದ್ದು, ಕರ್ನಾಟಕದ ಎಲ್ಲಾ ಜನತೆ ಹೆಸರಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅರ್ಚನೆ ಮಾಡಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿಯಾಗಿ ಚೊಚ್ಚಲ ಬಜೆಟ್ ಮಂಡಿಸಲಿದ್ದು, ಇದರ ಪ್ರಯುಕ್ತ ಇಂದು ಬೆಂಗಳೂರಿನ ಶ್ರೀಕಂಠೇಶ್ವರ ದೇವಸ್ಥಾನ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಇಂದು ವಿಶೇಷ ಪೂಜೆ ಸಲ್ಲಿಸಿ, ಸಮಸ್ತ ಕರ್ನಾಟಕದ ಜನತೆಯ ಹೆಸರಿನಲ್ಲಿ ಅರ್ಚನೆ ಮಾಡಿಸಲಾಯಿತು ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಸಿ ಸಿ ಪಾಟೀಲ್, ಬೈರತಿ ಬಸವರಾಜ ಹಾಗೂ ಶಾಸಕರಾದ ಬಿ ಜಿ ಪಾಟೀಲ್ ಸಾಥ್ ನೀಡಿದ್ದಾರೆ.