ಬೆಂಗಳೂರು, ಮಾ 04 (DaijiworldNews/HR): ಪಶು ಸಂಗೋಪನೆ, ಹೈನುಗಾರಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ನೂತನ 100 ಪಶುಚಿಕಿತ್ಸಾಲಯಗಳ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ ಮಾಡಲಾಗುತ್ತಿದ್ದು, ರಾಜ್ಯ ಸರ್ಕಾರದಿಂದ 100 ಕೋಟಿ ರೂ. ಷೇರು ಬಂಡವಾಳ ನೀಡಲಾಗುವುದು ಎಂದು ಪೋಷಿಸಿದ್ದಾರೆ.
ಇನ್ನು ರಾಜ್ಯದಲ್ಲಿರುವ ಗೋಶಾಲೆಗಳ ಸಂಖ್ಯೆ 100ಕ್ಕೆ ಹೆಚ್ಚಳ ಮಾಡಲಾಗುತ್ತಿದ್ದು, 50 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು. ಜೊತೆಗೆ ಗೋಶಾಲೆಗಳಲ್ಲಿನ ಗೋವುಗಳ ದತ್ತು ಪ್ರೋತ್ಸಾಹಕ್ಕೆ ರಾಜ್ಯದಲ್ಲಿ ಮೊದಲ ಬಾರಿಗೆ ಪುಣ್ಯಕೋಟಿ ದತ್ತು ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.