ಬೆಂಗಳೂರು, ಮಾ 04 (DaijiworldNews/DB): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-23ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಮೀನುಗಾರರ ಹಿತದೃಷ್ಟಿಯಿಂದ ಈ ಬಾರಿಯ ಬಜೆಟ್ ನಲ್ಲಿ ಒತ್ತು ನೀಡಲಾಗಿದೆ. ವಸತಿ ರಹಿತ ಮೀನುಗಾರರಿಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ 5 ಸಾವಿರ ಮನೆಗಳ ನಿರ್ಮಾಣ ಘೋಷಣೆ ಮೂಲಕ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.
ಮೀನುಗಾರಿಕೆಗೆ ದೊರಕಿದ್ದು:
*ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಆಳಸಮುದ್ರ ಮೀನುಗಾರಿಕೆಗೆ ನೆರವು,
*ಮೀನುಗಾರರಿಗೆ 100 ದೋಣಿಗಳ ವಿತರಣೆ
*ಚಿಪ್ಪು ಮೀನುಗಳ ಉತ್ಪಾದನೆಗೆ ಪ್ರೋತ್ಸಾಹ
*ಮತ್ಸ್ಯ ಸಿರಿ ಯೋಜನೆಗೆ ಅನುದಾನ
*ಕರಾವಳಿ ಪ್ರದೇಶದ ನದಿಗಳಿಗೆ ಉಪ್ಪು ನೀರು ತಡೆಯುವ ಯೋಜನೆಗೆ ಅನುದಾನ
*ಕಾರವಾರದಲ್ಲಿ ರಾಜ್ಯದ ಮೊದಲ ಜಲಸಾರಿಗೆ ಮತ್ತು ಮೀನುಗಾರಿಕೆ ತರಬೇತಿ ಸಂಸ್ಥೆ ಸ್ಥಾಪನೆ
*ಉತ್ತರ ಕನ್ನಡ ಜಿಲ್ಲೆಯ ಮಾಜಾಳಿಯಲ್ಲಿ ಪ್ರಧಾನಮಂತ್ರಿ ಮತ್ಸಸಂಪದ ಯೋಜನೆಯಡಿ 250 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಮೀನುಗಾರಿಕಾ ಬಂದರು ನಿರ್ಮಾಣ
ಕೇಂದ್ರದ ಸಾಗರ ಮಾಲಾ ಯೋಜನೆಯಡಿ 1,880 ಕೋಟಿ ರೂ. ಅಂದಾಜು ವೆಚ್ಚದ 24 ಯೋಜನೆ ಅನುಷ್ಠಾನಕ್ಕೆ ಒತ್ತು