ಬೆಂಗಳೂರು, ಮಾ 04 (DaijiworldNews/HR): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಮೊದಲ ಚೊಚ್ಚಲ ಬಜೆಟ್ ಅನ್ನು ಮಂಡಿಸಿದ್ದು, ರಾಜ್ಯದಿಂದ ಕಾಶಿಗೆ ಯಾತ್ರೆ ಕೈಗೊಳ್ಳುವವರಿಗೆ ಸಹಾಯಧನ ನೀಡಲಾಗುವುದು ಎಂದು ಘೋಷಿಸಲಾಗಿದೆ.
ಕರ್ನಾಟಕದದಿಂದ ಕಾಶಿ ಯಾತ್ರೆಯನ್ನು ಕೈಗೊಳ್ಳುವ ಸುಮಾರು 30,000 ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ 5,000 ಸಹಾಯಧನ ನೀಡಲಾಗುವುದು. ಅಲ್ಲದೆ ಯಾತ್ರಾಸ್ಥಳ ಶ್ರೀಶೈಲದಲ್ಲಿ 85 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ಸಂಕೀರ್ಣ ನಿರ್ಮಾಣ ಮಾಡಲಾಗುವುದು. ಇದರ ಮೊದಲ ಹಂತದ ಕಾಮಗಾರಿಗೆ 45 ಕೋಟಿ ಅನುದಾನ ನೀಡಲಾಗುವುದು ಎಂದು ತಿಳಿಸಲಾಗಿದೆ.
ಇನ್ನು ಕಡಿಮೆ ಖರ್ಚಿನಲ್ಲಿ ಪುಣ್ಯ ಕ್ಷೇತ್ರಗಳಿಗೆ ಪ್ರವಾಸ ಕೈಗೊಳ್ಳಲು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ಮರವತ್ತೂರು ಇನ್ನಿತರ ಸ್ಥಳಗಳಿಗೆ ಪ್ಯಾಕೇಜ್ ಟ್ರಿಪ್ ಸೇವೆ ಪ್ರಾರಂಭಿಸಲಾಗುವುದು ಎಂದು ಬಜೆಟ್ನಲ್ಲಿ ಉಲ್ಲೇಖಿಸಲಾಗಿದೆ.