ಬೆಂಗಳೂರು, ಮಾ 04 (DaijiworldNews/HR): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದು, ಕರಾವಳಿ ಭಾಗದ ಜಲ ಮೂಲಗಳನ್ನು ಕಲುಷಿತಗೊಳಿಸುತ್ತಿರುವ ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟು ಹೊಸ ಯೋಜನೆಯನ್ನು ಜಾರಿ ಮಾಡಲಾಗಿದೆ.
ಕರಾವಳಿ ಭಾಗದ ಜಲ ಮೂಲಗಳನ್ನು ಕಲುಷಿತಗೊಳಿಸುತ್ತಿರುವ ಪ್ಲಾಸ್ಟಿಕ್ ಮಾಲಿನ್ಯವನ್ನು ನಿರ್ವಹಿಸಲು ವಿಶ್ವ ಬ್ಯಾಂಕ್ ನೆರವಿನೊಂದಿಗೆ ವಿನೂತನವಾದ ಬ್ಲೂ - ಪ್ಲಾಸ್ಟಿಕ್ ನಿರ್ವಹಣೆ ಯೋಜನೆಯನ್ನು ಜಾರಿಗೊಳಿಸಲಾಗಿದೆ.
ಇನ್ನು ಮುಂದಿನ 5 ವರ್ಷಗಳ ಅವಧಿಗೆ ಒಟ್ಟು 840 ಕೋಟಿ ರೂ. ಗಳ ವೆಚ್ಚದಲ್ಲಿ ದೇಶದಲ್ಲೇ ಮೊಟ್ಟ ಮೊದಲಿಗೆ ಬ್ಲೂ - ಪ್ಲಾಸ್ಟಿಕ್ ನಿರ್ವಹಣೆ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.