ಬೆಂಗಳೂರು, ಮಾ 05 (DaijiworldNNews/HR): ರಾಜ್ಯದಲ್ಲಿ ಶನಿವಾರ 278 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮೂವರು ಮೃತಪಟ್ಟಿದ್ದಾರೆ. 458 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿಂದು 278 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 39,42,346 ಕ್ಕೆ ಏರಿಕೆಯಾಗಿದೆ. ಇದುವರೆಗೆ 39,988 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಇನ್ನು 38,99,034 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 3286 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 0.53 ರಷ್ಟು ಇದೆ.
ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಗದಗ, ಮಂಡ್ಯ, ರಾಯಚೂರು, ರಾಮನಗರ, ವಿಜಯಪುರ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.