ಶಿವಮೊಗ್ಗ, ಮಾ 06 (DaijiworldNews/HR): ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣವನ್ನು ಶೀಘ್ರವೇ ಎನ್ಐಎ ತನಿಖಾ ತಂಡಕ್ಕೆ ನೀಡಲಾಗುವುದು ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರದ್ಲಾಂಜೆ ಹೇಳಿದ್ದಾರೆ.
ಹರ್ಷನ ಮನೆಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಾಯಕ ಹರ್ಷನ ಸಾವಿನ ಹಿಂದೆ ಅಂತರರಾಷ್ಟ್ರೀಯ ಷಡ್ಯಂತ್ರ ಅಡಗಿದೆ ಎಂಬ ಶಂಕೆ ಇದ್ದು, ಈ ಪ್ರಕರಣವನ್ನು ಕೇಂದ್ರ ಸರ್ಕಾರವೂ ಎನ್ಐಎಗೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ಹೇಳಿದೆ. ಎನ್ಐಎಗೆ ಈ ಪ್ರಕರಣ ಹಸ್ತಾಂತರಗೊಳ್ಳುವ ನಿರೀಕ್ಷೆ ಇದೆ ಎಂದರು.
ಇನ್ನು ಹರ್ಷನ ಕೊಲೆ ಮಾಡಿರುವುದನ್ನು ನೋಡಿದರೆ ತಾಲಿಬಾನ್ ಸಂಸ್ಕೃತಿ ಎದ್ದು ಕಾಣುತ್ತಿದ್ದು, ರಾಜ್ಯದಲ್ಲಿ ಸುಮಾರು 30 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದ್ದು, ಇದನ್ನು ತಡೆಹಿಡಿಯಬೇಕು ಎಂದು ಹೇಳಿದ್ದಾರೆ.