ಹೊಸದಿಲ್ಲಿ, ಮಾ 06 (DaijiworldNews/DB): ಬಿಎಸ್ ಎಫ್ ಸಿಬಂದಿಯೋರ್ವರು ತಮ್ಮ ಸಹದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ನಾಲ್ವರು ಯೋಧರು ಮೃತಪಟ್ಟ ಆಘಾತಕಾರಿ ಘಟನೆ ಪಂಜಾಬ್ ನ ಅಮೃತಸರದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಅಟ್ಟಾರಿ-ವಾಘಾ ಗಡಿಯಿಂದ ಸುಮಾರು 20 ಕಿಮೀ ದೂರದಲ್ಲಿರುವ ಖಾಸಾ ಪ್ರದೇಶದಲ್ಲಿನ ಫೊರ್ಸ್ ಮೆಸ್ ನಲ್ಲಿ ಘಟನೆ ನಡೆದಿದೆ. ಸಿಬಂದಿಯು ಮನಸೋಇಚ್ಛೆ ತಮ್ಮ ಸಹದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದಾಗಿ ನಾಲ್ವರು ಬಿಎಸ್ ಎಫ್ ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಗೆ ಕಾರಣವಾದ ಸಿಬಂದಿಯನ್ನೂ ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಗಡಿ ಭದ್ರತಾ ಪಡೆಯ ಹಿರಿಯ ಅಧಿಕಾರಿಗಳು ಆಗಮಿಸಿ ಮಾಹಿತಿ ಪಡೆದಿದ್ದಾರೆ ಎಂದು ಆಧಿಕಾರಿಗಳು ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.