ಬೆಂಗಳೂರು, ಮಾ 06 (DaijiworldNews/DB): ಉಕ್ರೇನ್ನಿಂದ ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರ ಸರಕಾರದ ಮೊದಲ ಆದ್ಯತೆಯಾಗಿದೆ. ಬಳಿಕ ಅವರ ಶಿಕ್ಷಣದ ಬಗ್ಗೆಯೂ ಕಾಳಜಿ ವಹಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಸ್ವದೇಶಕ್ಕೆ ಮರಳಿದ ವಿದ್ಯಾರ್ಥಿಗಳು ಶಿಕ್ಷಣ ಮುಂದುವರಿಸುವ ವಿಷಯವಾಗಿ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಅವರ ಶಿಕ್ಷಣಕ್ಕೆ ಸಮಸ್ಯೆ ಉಂಟಾಗದಂತೆ ಗಮನ ಹರಿಸಲಾಗುವುದು. ಆದರೆ ಪ್ರಸ್ತುತ ಉಕ್ರೇನ್ ನಲ್ಲಿ ಉಳಿದಿರುವ ರಾಜ್ಯದ ವಿದ್ಯಾರ್ಥಿಗಳನ್ನು ಕರೆ ತರುವುದೇ ಮೊದಲ ಆದ್ಯತೆ ಎಂದರು.
ಕರ್ನಾಟಕದ 366 ವಿದ್ಯಾರ್ಥಿಗಳು ಈಗಾಗಲೇ ರಾಜ್ಯಕ್ಕೆ ಹಿಂತಿರುಗಿದ್ದಾರೆ. ಯುದ್ಧ ಪೀಡಿತ ರಾಷ್ಟ್ರದಲ್ಲಿ ರಾಜ್ಯದ ಇನ್ನೂ ಹಲವು ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ. ಅವರ ಸುರಕ್ಷತೆ ಅಗತ್ಯವಾಗಿದೆ ಎಂದವರು ತಿಳಿಸಿದರು.