ಶಿವಮೊಗ್ಗ, ಮಾ 06 (DaijiworldNews/HR): ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಮನೆಗೆ ಮಾಜಿ ಸಿಎಂ ಯಡಿಯೂರಪ್ಪ ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ, ರಾಜ್ಯ ಸರ್ಕಾರದ ಪರವಾಗಿ ಹರ್ಷ ಕುಟುಂಬಕ್ಕೆ ಪರಿಹಾರ ಚೆಕ್ ನೀಡಿದ್ದಾರೆ.
ಹರ್ಷ ಕುಟುಂಬಸ್ಥರ ಭೇಟಿ ಬಳಿಕ ಮಾತನಾಡಿದ ಅವರು, 26 ವರ್ಷದ ಹರ್ಷ ಎಲ್ಲರ ಜೊತೆ ಆತ್ಮೀಯ ಸಂಬಂಧ ಹೊಂದಿದ್ದು, ಈ ಭಾಗದಲ್ಲಿ ಗೊಂದಲ, ಹೋರಾಟಕ್ಕೆ ಅವಕಾಶ ಕೊಡ್ತಾ ಇರಲಿಲ್ಲ. ಹಿಂದೂ ಯುವಮುಖಂಡನಾಗಿ ಹರ್ಷ ಬೆಳೆಯುತ್ತಿದ್ದ.ಇದನ್ನೂ ಸಹಿಸಕ್ಕಾಗದೇ ಕೆಲವು ಕಿಡಿಗೇಡಿಗಳು ಕೊಲೆ ಮಾಡಿದ್ದಾರೆ ಎಂದರು.
ಇನ್ನು ಸರ್ಕಾರದ ಕಡೆಯಿಂದ 25 ಲಕ್ಷ ರೂ. ಚೆಕ್ ಅನ್ನು ಅವರಿಗೆ ಕೊಟ್ಟಿದ್ದು, ಹಣ ಮುಖ್ಯ ಅಲ್ಲ. ಹರ್ಷನನ್ನು ಕಳೆದುಕೊಂಡ ಕುಟುಂಬದ ನೋವು ದೊಡ್ಡದು. ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂಬುವ ಪ್ರಾರ್ಥನೆ ಬಿಟ್ಟರೇ ನಮ್ಮ ಕೈಯಲ್ಲಿ ಏನೂ ಇಲ್ಲ ಎಂದಿದ್ದಾರೆ.