ರಾಮನಗರ, ಮಾ 06 (DaijiworldNews/DB): ಮೇಕೆದಾಟು ವಿಚಾರದಲ್ಲಿ ಯಾರ ಮಧ್ಯಸ್ಥಿಕೆಯೂ ಅಗತ್ಯವಿಲ್ಲ. ಯೋಜನೆಗೆ ತತ್ ಕ್ಷಣ ಕೇಂದ್ರ ಸರಕಾರ ಅನುಮತಿ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕನಕಪುರದಲ್ಲಿ ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೇಕೆದಾಟು ವಿಚಾರದಲ್ಲಿ ರಾಜ್ಯಗಳೆರಡು ಒಮ್ಮತದ ಮೂಲಕ ಸಮಸ್ಯೆ ಬಗೆ ಹರಿಸಿಕೊಳ್ಳಬೇಕೇ ಹೊರತು ನಾವೇನು ಮಾಡಲು ಆಗುವುದಿಲ್ಲ ಎಂದು ಕೇಂದ್ರ ಜಲ ಸಂಪನ್ಮೂಲ ಸಚಿವರು ಹೇಳಿಕೆ ನೀಡಿರುವುದು ಖಂಡನೀಯ. ಕೇಂದ್ರ ಸಚಿವರ ಹೇಳಿಕೆ ಸಂಬಂಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೌನವಹಿಸಿರುವುದು ಸರಿಯಲ್ಲ. ಅವರು ಕೇಂದ್ರದಿಂದ ಎನ್ ಓಸಿ ಪಡೆಯಬೇಕು ಇಲ್ಲವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ಮತ್ತು ಕೇಂದ್ರ ಸರಕಾರಗಳು ಜನರನ್ನು ದಿಕ್ಕು ತಪ್ಪಿಸುತ್ತಿವೆ ಎಂದು ಇದೇ ವೇಳೆ ಅವರು ಆಪಾದಿಸಿದರು.