ನವದೆಹಲಿ, ಮಾ 07 (DaijiworldNews/HR): ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರನ್ನು ಸಿಬಿಐಯು ಭಾನುವಾರ ತಡರಾತ್ರಿ ದೆಹಲಿಯಲ್ಲಿ ಬಂಧಿಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಬಳಿಕ ಸಿಬಿಐ ಪ್ರಧಾನ ಕಚೇರಿಯಲ್ಲಿ ಲಾಕಪ್ ನಲ್ಲಿಅವರನ್ನು ಇರಿಸಲಾಗಿದ್ದು, ಸಿಬಿಐ ಸತತ ಮೂರು ದಿನಗಳ ಕಾಲ ರಾಮಕೃಷ್ಣ ಅವರನ್ನು ವಿಚಾರಣೆ ಮಾಡಿದ್ದು ಅವರು ಸರಿಯಾದ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇನ್ನು ಸಿಬಿಐ ವಿಶೇಷ ನ್ಯಾಯಾಲಯ ಮೊನ್ನೆ ಶನಿವಾರ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ದೆಹಲಿ ಮೂಲದ ಸ್ಟಾಕ್ ಬ್ರೋಕರ್ ವಿರುದ್ಧ 2018ರಿಂದ ಕೊ ಲೊಕೇಶನ್ ಹಗರಣದ ತನಿಖೆ ನಡೆಸುತ್ತಿದ್ದ ಸಿಬಿಐ, ಸೆಬಿ ವರದಿಯ ನಂತರ ಎನ್ಎಸ್ಇಯ ಆಗಿನ ಉನ್ನತ ಅಧಿಕಾರಿಗಳು ಹೇಳುತ್ತಿದ್ದಾರೆ.
ಚಿತ್ರಾ ರಾಮಕೃಷ್ಣ ಅವರು ರಾಷ್ಟ್ರೀಯ ಷೇರು ವಿನಿಮಯ ಕೇಂದ್ರವನ್ನು 2016ರಲ್ಲಿ ತೊರೆದಿದ್ದರು.