ಬೆಂಗಳೂರು, ಮಾ 08 (DaijiworldNews/HR): ಸರ್ಕಾರದ ಇಲಾಖೆಯ ಇ-ಪೋರ್ಟಲ್ ಹ್ಯಾಕ್ ಮಾಡಿ ಹಣ ಲೂಟಿ ಮಾಡಿದವರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸರ್ಕಾರದ ಇಲಾಖೆಯ ಇ-ಪೋರ್ಟಲ್ ಹ್ಯಾಕ್ ಮಾಡಿ ಸಾರ್ವಜನಿಕ ಹಣ ಲೂಟಿ ಮಾಡಿದವರನ್ನು ಬಂಧಿಸಿ ಹಣ ವಸಾಲಾತಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಈಗಾಗಲೇ ಸುಮಾರು 17 ಮಂದಿಯನ್ನು ಬಂಧಿಸಲಾಗಿದೆ ಎಂದರು.
ಇನ್ನು ಹ್ಯಾಕಿಂಗ್ ವಿಚಾರವನ್ನು ರಾಜ್ಯ ಸರ್ಕಾರವು ಗಂಭೀರವಾಗಿ ತೆಗೆದುಕೊಂಡಿದ್ದು, 11.5 ಕೋಟಿಯಷ್ಟು ಹಣವನ್ನು ಹ್ಯಾಕಿಂಗ್ ಮಾಡಲಾಗಿದ್ದು ಇದರ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.