ಬೆಂಗಳೂರು, ಮಾ 09 (DaijiworldNews/DB): ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ಸಾವನ್ನಪ್ಪಿದ ಹಾವೇರಿಯ ನವೀನ್ ನಿವಾಸಕ್ಕೆ ವಿಧಾನಸಭೆಯ ವಿಪಕ್ಷ ನಾಯಕ ಸಿದ್ಧರಾಮಯ್ಯ ಬುಧವಾರ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನಿವಾಸದಲ್ಲಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಬಳಿಕ ನವೀನ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ವಿಧಾನಸಭೆ ಮಾಜಿ ಸ್ಪೀಕರ್ ಕೋಳಿವಾಡ, ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಜಯಮಾಲಾ, ಬ್ಯಾಡಗಿ ಶಿವಣ್ಣ, ಮುಖಂಡರಾದ ಬನ್ನಿಕೋಡ್, ಪ್ರಕಾಶ್ ಕೋಳಿವಾಡ, ಸೋಮಣ್ಣ ಬೇವಿನಮರದ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ. ಹಿರೇಮಠ ಮೊದಲಾದವರು ಉಪಸ್ಥಿತರಿದ್ದರು.