ಉತ್ತರಾಖಂಡ, ಮಾ 10 (DaijiworldNews/DB): ಉತ್ತರಾಖಂಡದ 70 ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಆರಂಭಿಕ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಗೆಲುವಿನತ್ತ ತೆರಳುತ್ತಿದೆ.
ಸದ್ಯ 48 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದರೆ, 18 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆಯುತ್ತಿದೆ. ಲಲ್ಕುವನ್ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ಮಾಜಿ ಸಿಎಂ ಹರೀಶ್ ರಾವತ್ ಮುನ್ನಡೆ ಸಾಧಿಸಿದ್ದಾರೆ. ಚುನಾವಣೆಪೂರ್ವ ಇಲ್ಲಿ ಬಿಜೆಪಿ ಸರಕಾರವಿದ್ದು, ಸಮೀಕ್ಷೆಗಳ ಪ್ರಕಾರ ಈ ಬಾರಿಯೂ ಬಿಜೆಪಿ ಅಧಿಕಾರಕ್ಕೇರಲಿದೆ ಎನ್ನಲಾಗಿತ್ತು. ಇದೀಗ ಆರಂಭಿಕ ಮತ ಎಣಿಕೆ ವೇಳೆಯೂ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಮತ್ತೊಮ್ಮೆ ಅಧಿಕಾರಕ್ಕೇರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.