ಚೆನ್ನೈ, ಮಾ 10 (DaijiworldNews/DB): ಚೆನ್ನೈನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಡಿಎಂಕೆ ರಾಜ್ಯಸಭಾ ಸದಸ್ಯ ಎನ್. ಆರ್. ಇಳಂಗೋವನ್ ಅವರ ಪುತ್ರ ರಾಕೇಶ್ ಮೃತಪಟ್ಟಿದ್ದಾರೆ.
ರಾಕೇಶ್ ಪುದುಚೆರಿಯಿಂದ ಚೆನ್ನೈಗೆ ಇನ್ನೊಬ್ಬ ವ್ಯಕ್ತಿ ಜೊತೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರು ಸಂಚರಿಸುತ್ತಿದ್ದ ವಾಹನವು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ 22 ವರ್ಷದ ರಾಕೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನೋರ್ವ ಪ್ರಯಾಣಿಕನಿಗೆ ಗಂಭೀರ ಗಾಯಗಳಾಗಿವೆ.